ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಮಾನ್ಯ ಮುಖ್ಯ ಆಡಳಿತಾಧಿಕಾರಿಗಳ ಬೆಟ್ಟಿ.
Date : 24-08-2025
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠಕ್ಕೆ ದಿನಾಂಕ:-24.08.2025 ರಂದು ಸನ್ಮಾನ್ಯ ಶ್ರೀಮತಿ ಬಿ.ಎಸ್.ಭಾರತಿ, ಮಾನ್ಯ ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಧಾರವಾಡ ಜಿಲ್ಲೆ, ಧಾರವಾಡ ಇವರು ಕುಟುಂಬ ಸಮೇತರಾಗಿ ಶ್ರೀಮಠಕ್ಕೆ ಬೆಟ್ಟಿ ಕೊಟ್ಟು ಉಭಯಶ್ರೀಗಳವರ ಗದ್ದುಗೆಗಳ ದರ್ಶನಾಶೀರ್ವಾದವನ್ನು ಪಡೆದುಕೊಂಡರು, ಗೌರವ ನ್ಯಾಯಾಧೀಶರನ್ನು ಶ್ರೀಮಠದ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು ಹಾಗೂ ಶ್ರೀಮತಿ ವೀಣಾ ನಾಯ್ಕರ, ಪ್ರಧಾನ ನ್ಯಾಯಾಧೀಶರು, ಕೌಟುಂಬಿಕ ನ್ಯಾಯಾಲಯ, ಹುಬ್ಬಳ್ಳಿ ಇವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಚೇರ್ಮನ್ನರಾದ ಶ್ರೀ ಸಿಎ. ಚನ್ನವೀರ ಡಿ. ಮುಂಗುರವಾಡಿ, ವೈಸ್-ಚೇರ್ಮನ್ನರಾದ ಶ್ರೀ ವಿನಾಯಕ ಅ. ಘೋಡ್ಕೆ, ಗೌರವ ಕಾರ್ಯದರ್ಶಿಗಳಾದ ಶ್ರೀ ರಮೇಶ ಎಸ್. ಬೆಳಗಾವಿ, ಧರ್ಮದರ್ಶಿಗಳಾದ ಶ್ರೀಮತಿ ಗೀತಾ ಟಿ. ಕಲಬುರ್ಗಿ, ಡಾ|| ಗೋವಿಂದ ಗು. ಮಣ್ಣೂರ, ಶ್ರೀ ಸಿದ್ದನಗೌಡ ಪಿ. ಪಾಟೀಲ, ಶ್ರೀಮತಿ ಸರ್ವಮಂಗಳಾ ಎನ್. ಪಾಠಕ ಹಾಗೂ ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.