ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ
Date : 27-08-2025
ದಿನಾಂಕ:-27.08.2025 ರಂದು ಶ್ರೀ ಸಿದ್ಧಾರೂಢಸ್ವಾಮಿಯವರ ಮಠದಲ್ಲಿ ಗಣೇಶ ಉತ್ಸವ ನಿಮಿತ್ತ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಶ್ರೀಮಠದ ಚೇರ್‌ಮನ್ನರಾದ ಶ್ರೀ ಸಿಎ. ಚನ್ನವೀರ ಡಿ. ಮುಂಗುರವಾಡಿ ಇವರು ಸಕಲ ಪೂಜೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಧರ್ಮದರ್ಶಿಗಳಾದ ಶ್ರೀಮತಿ ಗೀತಾ ಟಿ. ಕಲಬುರ್ಗಿ, ಡಾ|| ಗೋವಿಂದ ಗು. ಮಣ್ಣೂರ ಹಾಗೂ ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿ ವರ್ಗದವರು ಹಾಗೂ ಭಕ್ತವೃಂದದವರು ಉಪಸ್ಥಿತರಿದ್ದರು