ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಡಾ|| ರವಿಶಂಕರ ಗುರೂಜಿ ಇವರ ಭೆಟ್ಟಿ.
Date : 08-09-2025
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠಕ್ಕೆ ದಿನಾಂಕ:-07.09.2025 ರಂದು ಡಾ|| ರವಿಶಂಕರ ಗುರೂಜಿ, ಆರ್ಟ್ ಆಫ್ ಲೀವಿಂಗ್ ಸಂಸ್ಥೆ ಬೆಂಗಳೂರ ಇವರು ಶ್ರೀಮಠಕ್ಕೆ ಬೆಟ್ಟಿ ಕೊಟ್ಟು ಉಭಯಶ್ರೀಗಳವರ ಗದ್ದುಗೆಗಳ ದರ್ಶನಾಶೀರ್ವಾದವನ್ನು ಪಡೆದುಕೊಂಡರು. ಗುರೂಜಿಯವರನ್ನು ಶ್ರೀಮಠದ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಚೇರಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ, ವೈಸ್‌ಚೇರಮನ್ನರಾದ ಶ್ರೀ ವಿನಾಯಕ ಎ. ಘೋಡ್ಕೆ ಹಾಗೂ ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು