Shri Siddharoodha Swamiji Math Trust Committee

Hubballi

www.srisiddharoodhaswamiji.in

ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಸನ್ಮಾನ್ಯ ಶ್ರೀ ಎಫ್.ಎಚ್.ಜಕ್ಕಪ್ಪನವರ ಇವರ ಭೆಟ್ಟಿ.
Date : 09-09-2025
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠಕ್ಕೆ ದಿನಾಂಕ:-09.09.2025 ರಂದು ಕರ್ನಾಟಕ ವಿಧಾನ ಪರಿಷತ್ ನೂತನ ಸದಸ್ಯರಾದ ಸನ್ಮಾನ್ಯ ಶ್ರೀ ಎಫ್.ಎಚ್.ಜಕ್ಕಪ್ಪನವರ ಇವರು ಶ್ರೀಮಠಕ್ಕೆ ಬೆಟ್ಟಿ ಕೊಟ್ಟು ಉಭಯಶ್ರೀಗಳವರ ಗದ್ದುಗೆಗಳ ದರ್ಶನಾಶೀರ್ವಾದವನ್ನು ಪಡೆದುಕೊಂಡರು. ಸನ್ಮಾನ್ಯರನ್ನು ಶ್ರೀಮಠದ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶ್ರೀಮಠದ ಭಕ್ತರ ಮೇಲ್ಮನೆ ಸಭಾದ ಅಧ್ಯಕ್ಷರಾದ ಶ್ರೀ ಡಿ.ಆರ್.ಪಾಟೀಲ, ಟ್ರಸ್ಟ್ ಕಮೀಟಿಯ ಚೇರಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ ಧರ್ಮದರ್ಶಿಗಳಾದ ಶ್ರೀ ಬಾಳು ಟಿ. ಮಗಜಿಕೊಂಡಿ, ಡಾ|| ಗೋವಿಂದ ಗು. ಮಣ್ಣೂರ, ಶ್ರೀ ಉದಯಕುಮಾರ ಡಿ. ನಾಯ್ಕ, ಮಾಜಿ ಚೇರ್‌ಮನ್ನರುಗಳಾದ ಶ್ರೀ ಮಹೇಂದ್ರ ಎಚ್. ಸಿಂಘಿ, ಶ್ರೀ ಡಿ.ಡಿ.ಮಾಳಗಿ, ಭಕ್ತರಾದ ಶ್ರೀ ಸದಾನಂದ ಡಂಗನವರ, ಶ್ರೀ ಮಹೇಶ ದಾಬಡೆ, ಶ್ರೀ ಸತೀಶ ಮೆಹರವಾಡೆ ಹಾಗೂ ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು