Shri Siddharoodha Swamiji Math Trust Committee

Hubballi

www.srisiddharoodhaswamiji.in

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಮರಗೋಳ ವರ್ತಕರಿಗೆ ಗೌರವ ಸಮರ್ಪಣೆ
Date : 16-11-2025
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ಪ್ರತಿ ನಿತ್ಯ ನಡೆಯುವ ಅನ್ನಸಂತರ್ಪಣೆಗೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಮರಗೋಳ ಇಲ್ಲಿಯ ವರ್ತಕರು ಆಲೂಗಡ್ಡೆ ಹಾಗೂ ಉಳ್ಳಾಗಡ್ಡೆಯನ್ನು ಉಚಿತವಾಗಿ ಶ್ರೀಮಠಕ್ಕೆ ದೇಣಿಗೆಯನ್ನು ಸಲ್ಲಿಸುತ್ತಾ ಬರುತ್ತಿದ್ದಾರೆ. ಇಂತಹ ದಾನಿಗಳನ್ನು ಶ್ರೀಮಠಕ್ಕೆ ಆವ್ಹಾನಿಸಿ ದಿನಾಂಕ:-16.11.2025 ರಂದು ಗೌರವಿಸಿ ಪ್ರಸಾದ ವಿತರಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ ಕಮೀಟಿಯ ಧರ್ಮದರ್ಶಿಗಳಾದ ಶ್ರೀ ಉದಯಕುಮಾರ ಡಿ. ನಾಯ್ಕ, ಡಾ|| ಗೋವಿಂದ ಗು. ಮಣ್ಣೂರ, ಶ್ರೀ ಸಿದ್ದನಗೌಡ ಪಿ. ಪಾಟೀಲ ಮತ್ತು ಶ್ರೀಮಠದ ಮ್ಯಾನೇಜರ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು