ಸ್ವಾತಂತ್ರ್ಯ ದಿನದ ಧ್ವಜಾರೋಹಣ ಕಾರ್ಯಕ್ರಮ
Date : 15-08-2026
ಹುಬ್ಬಳ್ಳಿಯ ಸದ್ಗುರು ಶ್ರೀ ಸಿದ್ಧಾರೂಢಸ್ವಾಮಿಯವರ ಮಠದಲ್ಲಿ ದಿನಾಂಕ: ೧೫-೦೮-೨೦೨೬ ರಂದು ೮೦ ನೇ ಸ್ವಾತಂತ್ರ್ಯ ದಿನದ ಧ್ವಜಾರೋಹಣವನ್ನು ಟ್ರಸ್ಟ್ ಕಮೀಟಿಯವತಿಯಿಂದ ಚೇರ್ಮನ್ನರಾದ ಶ್ರೀ ಬಾಳು ಟಿ. ಮಗಜಿಕೊಂಡಿ ಇವರು ಬೆಳಿಗ್ಗೆ ೮-೩೦ ಘಂಟೆಗೆ ಪೂಜೆ ಸಲ್ಲಿಸಿ ಧ್ವಜಾರೋಹಣವನ್ನು ನೆರವೇರಿಸಿದರು, ಸಾನಿಧ್ಯವನ್ನು ಪೂಜ್ಯ ಶ್ರೀ ಶಾಂತಾನAದ ಮಹಾಸ್ವಾಮಿಗಳು ವಹಿಸಿದ್ದರು. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ವೈಸ್-ಚೇರ್ಮನ್ನರಾದ ಶ್ರೀಮತಿ ಗೀತಾ ಟಿ. ಕಲಬುರ್ಗಿ, ಗೌರವ ಕಾರ್ಯದರ್ಶಿಗಳಾದ ಶ್ರೀ ವಿನಾಯಕ ಅ. ಘೋಡಕೆ, ಧರ್ಮದರ್ಶಿಗಳಾದ ಶ್ರೀ ವಿ.ವಿ.ಮಲ್ಲಾಪೂರ, ಶ್ರೀ ಉದಯಕುಮಾರ ಡಿ. ನಾಯ್ಕ, ಶ್ರೀ ಮಂಜುನಾಥ ಎಸ್. ಮುನವಳ್ಳಿ ಹಾಗೂ ಶ್ರೀಮಠದ ಸಿಬ್ಬಂದಿವರ್ಗದವರು, ಪಾಠಶಾಲಾ ವಿದ್ಯಾರ್ಥಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು, ಮಾಜಿ ಧರ್ಮರ್ಶಿಗಳಾದ ಶ್ರೀ ಎಸ್.ಆಯ್.ಕೋಳಕೂರ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.