ಶ್ರೀ ಸಿದ್ಧಾರೂಢಸ್ವಾಮಿಯವರ ಮಠದ ಪುಷ್ಕರಣಿಯಲ್ಲಿ ಆರೂಢ ಆರತಿ
Date : 15-06-2026
ದಿನಾಂಕ:-15.06.2026 ರ ಸೋಮವಾರ ದಂದು ರಾತ್ರಿ ೦8-೦೦ ಗಂಟೆಗೆ ಸದ್ಗುರು ಶ್ರೀ ಸಿದ್ಧಾರೂಢ ಮಹಾಸ್ವಾಮಿಗಳ ಹಾಗೂ ಮೌನಯೋಗಿ ಸದ್ಗುರು ಶ್ರೀ ಗುರುನಾಥಾರೂಢ ಮಹಾಸ್ವಾಮಿಗಳವರ ಮಠದ ಆವರಣದಲ್ಲಿ ಇರುವ ಪುಷ್ಕರಣಿಯಲ್ಲಿ “ಆರೂಢ ಆರತಿ” ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸನ್ಮಾನ್ಯ ಶ್ರೀಮತಿ ಕೆ.ಜಿ.ಶಾಂತಿ, ಗೌರವಾನ್ವಿತ ನ್ಯಾಯಮೂರ್ತಿಗಳು, ಕರ್ನಾಟಕ ಉಚ್ಚ ನ್ಯಾಯಾಲಯ, ಧಾರವಾಡ. ಇವರು ಕುಟುಂಬ ಸಮೇತರಾಗಿ ಆಗಮಿಸಿದ್ದರು. ಅಧ್ಯಕ್ಷತೆಯನ್ನು ಟ್ರಸ್ಟ ಕಮೀಟಿಯ ಚೇರಮನ್ನರಾದ ಶ್ರೀ ಬಾಳು ಟಿ. ಮಗಜಿಕೊಂಡಿ ಇವರು ವಹಿಸಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಮಠದ ಧರ್ಮದರ್ಶಿಗಳಾದ ಶ್ರೀ ಉದಯಕುಮಾರ ಡಿ. ನಾಯಕ ಇವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಗೌರವ ಕಾರ್ಯದರ್ಶಿಗಳಾದ ಶ್ರೀ ವಿನಾಯಕ ಅ. ಘೋಡಕೆ, ಧರ್ಮದರ್ಶಿಗಳಾದ ಡಾ|| ಗೋವಿಂದ ಗು. ಮಣ್ಣೂರ, ಶ್ರೀ ಚನ್ನವೀರ ಡಿ. ಮುಂಗುರವಾಡಿ, ಶ್ರೀ ಮಂಜುನಾಥ ಎಸ್. ಮುನವಳ್ಳಿ ಮತ್ತು ಸಿಬ್ಬಂದಿವರ್ಗದವರು ಹಾಗೂ ಅಪಾರ ಭಕ್ತಾದಿಗಳು ಪಾಲ್ಗೊಂಡಿದ್ದರು